25
ಏಪ್ರಿಲ್
08

ಚುಣಾವಣೆ ಎಂಬ ಅಖಾಡದ ಹೊಸ್ತಿಲಲ್ಲಿ.

ಈ ಬಾರಿ ಬೇಸಿಗೆಯ ಜಳಪಿನ ಜೊತೆಗೆ ಕಾವೇರಿದ ಸಂಗತಿಗಳು ಹಲವಾರು. ಮುಗಿಲು ಮುಟ್ಟಿದ ದಿನಸಿ ಹಣ್ಣು ತರಕಾರಿಗಳ ಬೆಲೆಗಳು ನಮ್ಮ ಮನೆಗಳ ತಿಂಗಳ ಬಜೆಟ್ಟಿನ ಚೌಕಟ್ಟನ್ನು ದಾಟಿ ಸಾಮಾನ್ಯ ಜನರ ಜೀವನದಲ್ಲಿ ಏರುಪೇರು ಮಾಡಿರೋದಂತು ನಿಜ. ಕಡು ಬಿಸಿಲು ಕಣ್ಣು ಬಿಚ್ಚಿ ಎಲ್ಲೆಡೆ ಆವರಿಸಿಕೊಳ್ಳುವ ರಥಸಪ್ತಮಿಯ ಹೊತ್ತಿಗೆ ಮೋಡ ಕಟ್ಟಿ ಗುಡುಗು ಮಿಂಚಿನೊಂದಿಗೆ ಧರೆಗಿಳಿದ ಅಕಾಲಿಕ ಮಳೆರಾಯ ನಗರವಾಸಿಗಳಿಗೆ ಒಂದಷ್ಟು ತಂಪನೆರೆದನಾದರೂ, ಅತ್ತ ಕೃಷಿಕನ ಹಗಲು ರಾತ್ರಿಗಳ ಪರಿಶ್ರಮದಿಂದ ನಳನಳಿಸುತ್ತಿದ್ದ ಬೆಳೆಗಳು ನೀರು ಪಾಲಾದದ್ದು ಮತ್ತೊಂದು ದುರಂತ. ಉತ್ತರ ಕರ್ನಾಟಕದ ಕಡೆ ದ್ರಾಕ್ಷಿ, ಬೆಣಸಿನಕಾಯಿ ಇತ್ತ ದಕ್ಷಿಣದಲ್ಲಿ ಮಾವು ಮತ್ತು ಒಕ್ಕಣೆಯ ದವಸ ದಾನ್ಯಗಳು ನೆಲೆಕಚ್ಚಿದವು. ಇದೆಲ್ಲದರ ನಡುವೆ ಮತ್ತೊಮ್ಮೆ “ಚಿಕನ್ ಗುನ್ಯ” ಜ್ವರ ಮತ್ತೆ ಘಟ್ಟ ಪ್ರದೇಶಗಳಲ್ಲಿ ಕಾಣಿಸಿಕೊಂಡಿರುವ ಸುದ್ದಿ ಬಂದಿದೆ. ಕಳೆದ ವರ್ಷ ಗ್ರಾಮೀಣರ ಬದುಕನ್ನು ಹಿಂಡಿ ಹಿಪ್ಪೆ ಮಾಡಿದ್ದ “ಚಿಕನ್ ಗುನ್ಯ” ಮತ್ತೆ ಎಲ್ಲರ ನಿದ್ದೆ ಕೆಡಿಸುವ ಹೊಸ್ತಿಲಲ್ಲಿದೆ. ಮೊನ್ನೆ ಪತ್ರಿಕೆಗಳಲ್ಲಿ ಬಂದ ಸುದ್ದಿಯ ಪ್ರಕಾರ ಸುಳ್ಯದ ಸುತ್ತಮುತ್ತಲಿನ ಐದು ಜನರಿಗೆ “ಚಿಕನ್ ಗುನ್ಯ” ಬಂದಿರುವುದು ಖಾತರಿಯಾಗಿದೆ.

ಯಾಕೊ ಗೊತ್ತಿಲ್ಲ ಈ ಬಾರಿಯ ಚುಣಾವಣೆಯ ಬಗ್ಗೆ ನನ್ಗೆ ಅಷ್ಟು ಒಲವಿಲ್ಲ, ನನ್ನೊಬ್ಬನ ಪರಿಸ್ಥಿತಿಯೊ ಅಥವ ಇನ್ನೂ ಹಲವರದ್ದೊ ಗೊತ್ತಿಲ್ಲ. ಮೊದಲಾದರೆ ಯಾರು ಗೆಲ್ಲ ಬಹುದು? ಮತ್ತೇನು ಹೊಸ ಹೊಸ ಕೆಲಗಳನ್ನು ಮಾಡಿಯಾರು? ಎಂಬ ಕುತೂಹಲವಾದರು ಇರುತ್ತಿತ್ತು. ಈ ಬಾರಿಯೂ ಯಾವ ಪಕ್ಷಕ್ಕೂ ಪೂರ್ಣ ಬೆಂಬಲ ಬರುವ ನಿರೀಕ್ಷೆ ಅವರಿಗೂ ಇಲ್ಲ, ನನಗಂತು ಮೊದಲೆ ಇಲ್ಲ. ಮತ್ತೆ ಅದೆ ಹುಲಿ ಕುರಿಯಾಟ, ರೆಸಾರ್ಟು ರಾಜಕಾರಣ, ಇವತ್ತು ಒಬ್ಬರ ಮೇಲೊಬ್ಬರು ಕತ್ತಿ ಮಸೆಯುತ್ತಿರುವವರು ನಾಳೆ ಪಕ್ಕನ ಕುರ್ಚಿಯಲ್ಲಿ ಕೂತು ಕಾಸು ಮಾಡುತ್ತಾರೆ. ಒಟ್ಟಿನಲ್ಲಿ ಗೌಡರ ಲೆಕ್ಕಾಚಾರ ಈ ಬಾರಿಯು ಸಾಗುವ ಲಕ್ಷಣಗಳೇ ಹೆಚ್ಚು. ಈ ಪರಿಸ್ಥಿಯ ನಡುವೆಯು ನಮ್ಮ ರವಿ ಕೃಷ್ಣಾ ರೆಡ್ಡಿಯಂತ ಸಾಫ್ಟ್ ವೇರ್ ಜೀವಿ ಅಮೇರಿಕಾದಿಂದ ನೇರ ಚುನಾವಣಾ ಅಖಾಡಕ್ಕೆ ದುಮುಕಿರುವುದು ಒಳ್ಳೆಯ ನಿರ್ಧಾರ, ಅವರಿಗೆ ಈ ಕೆಲಸದಲ್ಲಿ ಯಶಸ್ಸು ಸಿಗಲಿ. ಚುನಾವಣೆ ಸಮಯದಲ್ಲಿ ಮಾತ್ರ ಸಿಕ್ಕ ಸಿಕ್ಕವರಿಗೆ ಕೈಮುಗಿಯುತ್ತ ಪ್ರೀತಿ ವಿಶ್ವಾಸದ ಧಾರೆಯೆರೆಯುತ್ತಾ ಕಾಣಿಸಿಕೊಳ್ಳೊ ಜಿಡ್ಡುಗಟ್ಟಿದ ನಮ್ಮ ತಾತನ ಕಾಲದ ಪಳಯುಳಿಕೆಗಳು, ಆಗ ತಾನೆ ಜೈಲಿನಿಂದ ನೇರ ಚುನಾವಣಾ ಅಖಾಡಕ್ಕೆ ಇಳಿದು ರಾರಾಜಿಸುವ ಮಂದಿ, ಹಣ ಹೆಂಡ ತೋಳ್ಬಲವನ್ನೆ ಗೆಲ್ಲುವ ಕುದುರೆಯಾಗಿಸಿಕೊಂಡವರೆ ಸಾಮಾನ್ಯವಾಗಿ ಇರುತ್ತಿದ್ದರು. ಈ ಬಾರಿ ಚುಣಾವಣೆಗೆಯಲ್ಲಿ ಹೊಸ ತಳಿಗಳ ಜನ ಕೂಡ ಅಖಾಡಕ್ಕೆ ಇಳಿದಿದ್ದಾರೆ, ಅದರಲ್ಲಿ ಪ್ರಮುಖರು ಗಣಿಯ ಧಣಿಗಳು, ರಿಯಲ್ ಎಸ್ಟೇಟ್ ದೊರೆಗಳು, ಕೊನೆಗೆ ಕೆಲಸ ಮಾಡೊ ಮನಸ್ಸಿರೊ ಒಂದು ಮುಖವಾದರು ಕಾಣಿಸಿದರೆ ಸಾಕು. ಏನೇ ಆದರು ನಾನಂತು ಮೇ ೧೦ನೇ ತಾರೀಕು ನನ್ನ ಓಟು ಹಾಕೊದಂತು ಗ್ಯಾರಂಟಿ…. 🙂 ನೀವು ಬರ್ತಿರಾ ತಾನೆ?

“ಈ ಸಲವಾದರು ಒಂದು ಪಕ್ಷಕ್ಕೆ ಪೂರ್ಣ ಬೆಂಬಲ ಸಿಗಲಿ, ಸೂತ್ರದ ಗೊಂಬೆಯ ಪಾಡು ನಮ್ಮ ಸರ್ಕಾರಕ್ಕೆ ಬೇಡ.”


2 Responses to “ಚುಣಾವಣೆ ಎಂಬ ಅಖಾಡದ ಹೊಸ್ತಿಲಲ್ಲಿ.”


  1. ಏಪ್ರಿಲ್ 29, 2008 ರಲ್ಲಿ 5:18 ಅಪರಾಹ್ನ

    ಐ.ಟಿ. ಮಂದಿ ಈಸಲ ಚುನಾವಣೆ ಬಗ್ಗೆ ಕಣ್ ತೆರೀತಾ ಇರೋದು ಗಮನಾರ್ಹ ಬೆಳವಣಿಗೆ. ನಿಮಗೆ ಕಡಿಮೆ ದುಡ್ಡು ತಿನ್ನುವ, ಹೆಚ್ಚು ಕೆಲಸ ಮಾಡಿಸುವ, ಉತ್ತಮ ಶಾಸಕರು ಸಿಗ್ಲಿ ಅಂತ ಹಾರೈಸ್ತೀನಿ 🙂

  2. ಏಪ್ರಿಲ್ 30, 2008 ರಲ್ಲಿ 5:37 ಫೂರ್ವಾಹ್ನ

    ನಿಮ್ಮ ಮಾತು ಸತ್ಯ ಆಗ್ಲಿ ……. ದೂರ್ಬಿನ್ ಹಿಡ್ಕೊಂಡು ನೋಡ್ತಿದ್ದೀನಿ ಯಾರ ಯಾರ ಬಣ್ಣ ಬಯಲಾಗುತ್ತೊ ನೋಡುವ. 🙂


ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s


ಯಾವಾಗ ಬರೆದದ್ದು.

ಈ ತಿಂಗಳ ಪಂಚಾಂಗ.

ಏಪ್ರಿಲ್ 2008
ಸೋಮ ಮಂಗಳ ಬುಧ ಗುರು ‍ಶು ಶನಿ ಭಾನು
« ಮಾರ್ಚ್   ಮೇ »
 123456
78910111213
14151617181920
21222324252627
282930  

p

Powered by eSnips.com
Advertisements

%d bloggers like this: